ಕಾರ್ಕಳ : ಅಂಬೇಡ್ಕರ್​ ಭವನ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ : ಹಲವು ಬೇಡಿಕೆಗಳ ಈಡೇರಿಕೆಯ ಅಭಯ

ಕಾರ್ಕಳ (Karkala) : ಸಮಾಜ ಕಲ್ಯಾಣ ಇಲಾಖೆಯಿಂದ ಸುಮಾರು 7 ಕೋಟಿ ರೂಪಾಯಿ ವೆಚ್ಚದಲ್ಲಿ ಕಾರ್ಕಳದ ಹವಾಲ್ದಾರ್​ ಬೆಟ್ಟುವಿನಲ್ಲಿ ನಿರ್ಮಾಣ ಮಾಡಿರುವ ಡಾ.ಬಿ.ಆರ್​ ಅಂಬೇಡ್ಕರ್​ ಭವನವನ್ನು ಇಂದು ಸಿಎಂ ಸಿದ್ದರಾಮಯ್ಯ (CM Siddaramaiah ) ಲೋಕಾರ್ಪಣೆಗೊಳಿಸಿದ್ದಾರೆ.

: ಸಮಾಜ ಕಲ್ಯಾಣ ಇಲಾಖೆಯಿಂದ ಸುಮಾರು 7 ಕೋಟಿ ರೂಪಾಯಿ ವೆಚ್ಚದಲ್ಲಿ ಕಾರ್ಕಳದ ಹವಾಲ್ದಾರ್​ ಬೆಟ್ಟುವಿನಲ್ಲಿ ನಿರ್ಮಾಣ ಮಾಡಿರುವ ಡಾ.ಬಿ.ಆರ್​ ಅಂಬೇಡ್ಕರ್​ ಭವನವನ್ನು ಇಂದು ಸಿಎಂ ಸಿದ್ದರಾಮಯ್ಯ (CM Siddaramaiah ) ಲೋಕಾರ್ಪಣೆಗೊಳಿಸಿದ್ದಾರೆ.

ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ ವೀರಪ್ಪ ಮೊಯ್ಲಿ, ಸಚಿವರಾದ ಡಾ.ಎಚ್.ಸಿ.ಮಹಾದೇವಪ್ಪ, ಮಧು ಬಂಗಾರಪ್ಪ, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ವಿ. ಸುನೀಲ್​ ಕುಮಾರ್​, ಮಾಜಿ ಸಚಿವರಾದ ಗೋಪಾಲ ಪೂಜಾರಿ ಹಾಗೂ ಜಯಪ್ರಕಾಶ್ ಹೆಗ್ಡೆ, ಕಾಂಗ್ರೆಸ್ ಮುಖಂಡ ಹಾಗೂ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಮುನಿಯಲು ಉದಯ ಶೆಟ್ಟಿ, ವಿನಯ್ ಕುಮಾರ್ ಸೊರಕೆ ಸೇರಿದಂತೆ ಹಲವರು ಸಾಥ್​ ನೀಡಿದರು.

ಕಾರ್ಕಳದಲ್ಲಿ ಅಂಬೇಡ್ಕರ್‌ ಭವನ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಕಿಸಾನ್‌ ಸಭಾ ಸಭಾಂಗಣ ಉದ್ಘಾಟನೆ

ಕಿಸಾನ್​ ಸಭಾ ಟ್ರಸ್ಟ್​ ಕುಕ್ಕುಂದೂರು ವತಿಯಿಂದ ಆಯೋಜಿಸಲಾದ ಕಿಸಾನ್​ ಸಭಾ ಸಭಾಂಗಣ ಉದ್ಘಾಟನಾ ಸಮಾರಂಭದಲ್ಲಿ ನೆರವೇರಿಸಿ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಸ್ತಕಾಭಿಷೇಕಕ್ಕೆ ಆರ್ಥಿಕ ಸಹಾಯ ಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ವೀರಪ್ಪ ಮೊಯ್ಲಿ ಅವರು ಈ ಬಗ್ಗೆ ಪತ್ರ ಬರೆಯುವುದಾಗಿ ಹೇಳಿದ್ದಾರೆ .

ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಹಕಾರವನ್ನು ಸರ್ಕಾರದ ವತಿಯಿಂದ ನೀಡುವುದಾಗಿ ಘೋಷಣೆ ಮಾಡಿದರು. ಅಲ್ಲದೇ ಸ್ಥಳೀಯ ಶಾಸಕ ವಿ. ಸುನೀಲ್​ ಕುಮಾರ್​ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದು ಹಂತಹಂತವಾಗಿ ಎಲ್ಲಾ ಬೇಡಿಕೆಗಳನ್ನು ಪೂರೈಸುವುದಾಗಿ ಇದೇ ಸಂದರ್ಭದಲ್ಲಿ ಅಭಯ ನೀಡಿದರು.

ನಾನು ರಾಜ್ಯದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿ ಆಗಿದ್ದೇನೆ. ಅಂದು 165 ಭರವಸೆಗಳನ್ನು ನೀಡಿದ್ದೆ. ಅದರಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇನೆ. ಈ ಬಾರಿ 590 ಭರವಸೆಗಳನ್ನು ನೀಡಿದ್ದೆ. ಅದರಲ್ಲಿ 243 ಭರವಸೆಗಳನ್ನು ಈಡೇರಿಸಿದ್ದೇನೆ.

ಗ್ಯಾರಂಟಿ ಯೋಜನೆಗಳಿಗೆಂದೇ ನಮ್ಮ ಸರ್ಕಾರ ಪ್ರತಿ ವರ್ಷ 52 ಸಾವಿರ ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ಜಾತ್ಯಾತೀತವಾಗಿ, ಧರ್ಮಾತೀತವಾಗಿ ಬಡವರಿಗೆ ತಲುಪಿಸುತ್ತಿದ್ದೇವೆ.

ರಾಜ್ಯದ ಪ್ರತಿ ಮಹಿಳೆಯರಿಗೆ ಶಕ್ತಿ ಯೋಜನೆಯ ಲಾಭ ದೊರಕಿದೆ. ಗೃಹಲಕ್ಷ್ಮೀ ಯೋಜನೆಯ ಮೂಲಕ 1.2 ಕೋಟಿ ಯಜಮಾನಿಯರಿಗೆ ಹಣ ತಲುಪುತ್ತಿದೆ. ಗೃಹಜ್ಯೋತಿ ಯೋಜನೆಯಿಂದ ಎಲ್ಲರಿಗೂ ಪ್ರಯೋಜನವಾಗಿದೆ. ಅನ್ನ ಭಾಗ್ಯ ಯೋಜನೆಯ ಅಡಿಯಲ್ಲಿ ಕೇಂದ್ರದಿಂದ 5 ಕೆ.ಜಿ ಹಾಗೂ ರಾಜ್ಯ ಸರ್ಕಾರದಿಂದ 5 ಕೆ.ಜಿ ನೀಡುತ್ತಿದ್ದೇವೆ ಎಂದು ಹೇಳಿದರು.

Also Read : ನಾಯಿ ನೆಕ್ಕುವುದರಿಂದ ಪ್ರಾಣಕ್ಕೆ ಕುತ್ತು ಬರಬಹುದು ಎಚ್ಚರ ! ಏನಿದು ‘Dog Lick Sepsis’? ಲಕ್ಷಣ ಮತ್ತು ಚಿಕಿತ್ಸೆ ಬಗ್ಗೆ ಇಲ್ಲಿದೆ ಮಾಹಿತಿ

ನಾವು ಅಧಿಕಾರಕ್ಕೆ ಬಂದ ಒಂದೆ ವರ್ಷದಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. 1,20,000 ಕೋಟಿ ರೂಪಾಯಿಗಳನ್ನು ಇದಕ್ಕಾಗಿ ಖರ್ಚು ಮಾಡಿದ್ದೇವೆ. ಗ್ಯಾರಂಟಿ ಯೋಜನೆಗಳಿಂದಾಗಿ ಅಭಿವೃದ್ಧಿಗೆ ದುಡ್ಡಿಲ್ಲ ಎಂದು ಹೇಳುತ್ತಾರೆ. ಆದರೆ ನಾವು ಗ್ಯಾರಂಟಿಯನ್ನೂ ನೀಡಿದ್ದೇವೆ, ಅಭಿವೃದ್ಧಿಯನ್ನೂ ಮಾಡಿದ್ದೇವೆ ಎಂದು ಹೇಳುವ ಮೂಲಕ ಹೆಮ್ಮೆ ವ್ಯಕ್ತಪಡಿಸಿದರು.

ಕಾರ್ಕಳದಲ್ಲಿ ಅಂಬೇಡ್ಕರ್‌ ಭವನ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ನನಸಾಯ್ತು ಕಾರ್ಕಳ ಶಾಸಕರ ಕನಸು

ಕಾರ್ಕಳದ ನಗರದಲ್ಲಿ ಅಂಬೇಡ್ಕರ್‌ ಭವನ ನಿರ್ಮಾಣ ಮಾಡಬೇಕು ಅನ್ನೋದು ಕಾರ್ಕಳ ಶಾಸಕರಾದ ವಿ.ಸುನಿಲ್‌ ಕುಮಾರ್‌ ಅವರ ಕನಸು. ತಾವು ಸಚಿವರಾಗಿದ್ದ ಅವಧಿಯಲ್ಲಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು 6 ಕೋಟಿ ರೂಪಾಯಿ ವೆಚ್ಚದಲ್ಲಿ ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ಅನುಮೋದನೆಯನ್ನು ನೀಡಿದ್ದರು. ಸಚಿವರಾಗಿದ್ದ ಸುನಿಲ್‌ ಕುಮಾರ್‌ ಅವರೇ ಖುದ್ದು ಗುದ್ದಲಿ ಪೂಜೆ ನೆರವೇರಿಸಿದ್ದು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಬೇಡ್ಕರ್‌ ಭವನವನ್ನು ಉದ್ಘಾಟಿಸಿದ್ದಾರೆ.

Also Read : ವರ್ಷದ ಮೊದಲ ಚಂದ್ರಗ್ರಹಣ: ಹೋಳಿ ಹಬ್ಬದಂದೇ ಅಪರೂಪದ ವಿದ್ಯಮಾನ; ಈ 6 ರಾಶಿಯವರಿಗೆ ಅದೃಷ್ಟದ ಬಾಗಿಲು ಮುಕ್ತ!

CM Siddaramaiah Karkala Visit Ambedkar Bhavan Inauguration and Key Announcements

Exit mobile version