ಬಾಯಿ ಮುಚ್ಚಿಕೊಂಡು ಇರಬೇಕು ಎಂಬ ಆದೇಶ ಎಲ್ಲರೂ ಪಾಲಿಸಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸೃಷ್ಟಿಯಾಗಿರುವ ನಾಯಕತ್ವ ಬದಲಾವಣೆಯ ಗೊಂದಲ ಹಾಗೂ ಅಧಿಕಾರ ಹಂಚಿಕೆಯ ಹೇಳಿಕೆಗಳ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. “ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು ಎಂಬ ಮಲ್ಲಿಕಾರ್ಜುನ ಖರ್ಗೆ ಅವರ ಆದೇಶವನ್ನು ಪಾಲಿಸುವುದು ಪಕ್ಷದ ಹಿತದೃಷ್ಟಿಯಿಂದ ಒಳ್ಳೆಯದು” ಎಂದು ಅವರು ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನೀಡಿದ ಪ್ರಮುಖ ಹೇಳಿಕೆಗಳನ್ನು ನೀಡಿದರು.

ಪಕ್ಷಕ್ಕೆ ಹಾನಿ ಮಾಡುವ ಹೇಳಿಕೆಗಳು ಬೇಡ

ಅಧಿಕಾರ ಹಂಚಿಕೆ ಕುರಿತು ಶಾಸಕರು ಮತ್ತು ಸಚಿವರು ನೀಡುತ್ತಿರುವ ಪರ-ವಿರೋಧದ ಹೇಳಿಕೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಡಿಸಿಎಂ, “ಇಂತಹ ಹೇಳಿಕೆಗಳು ಪಕ್ಷಕ್ಕೆ ಹಾನಿ ಮಾಡುತ್ತವೆಯೇ ಹೊರತು ಯಾವುದೇ ಲಾಭ ತರುವುದಿಲ್ಲ. ಹೈಕಮಾಂಡ್ ಸೂಚನೆಯಂತೆ ಎಲ್ಲರೂ ಶಿಸ್ತು ಕಾಪಾಡಬೇಕು” ಎಂದು ತಿಳಿಸಿದರು.

ಸಿದ್ದರಾಮಯ್ಯ ಮತ್ತು ನನ್ನ ನಡುವೆ ಕದ್ದುಮುಚ್ಚಿ ಏನೂ ನಡೆದಿಲ್ಲ

“ನನಗೂ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಯಾವುದೇ ಗೊಂದಲವಿಲ್ಲ. ನಾವು ಏನು ಮಾತನಾಡಿದ್ದೇವೆ ಎಂಬುದು ನಮಗೆ ಮತ್ತು ಪಕ್ಷದ ವರಿಷ್ಠರಿಗೆ ತಿಳಿದಿದೆ. ನಾವಿಬ್ಬರೂ ಕದ್ದುಮುಚ್ಚಿ ಏನೂ ಮಾತನಾಡಿಕೊಂಡಿಲ್ಲ. ಬೇರೆಯವರು ಈ ಬಗ್ಗೆ ಟೆನ್ಷನ್ ಮಾಡಿಕೊಂಡು ಹೇಳಿಕೆ ನೀಡುವುದರಲ್ಲಿ ಅರ್ಥವಿಲ್ಲ” ಎಂದು ಗೊಂದಲಗಳಿಗೆ ತೆರೆ ಎಳೆದರು.

ಇದನ್ನೂ ಓದಿ:

ದೆಹಲಿ ಭೇಟಿ ಮತ್ತು ಬಜೆಟ್ ಸಭೆ

ಟೀಕೆಗಳಿಗೆ ಅಂಜುವುದಿಲ್ಲ
ಯತೀಂದ್ರ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡದ ಬಗ್ಗೆ ಶಾಸಕ ಇಕ್ಬಾಲ್ ಹುಸೇನ್ ಪ್ರಶ್ನಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಈ ಬಗ್ಗೆ ಹೈಕಮಾಂಡ್ ಅನ್ನೇ ಕೇಳೋಣ” ಎಂದರು. ಅಲ್ಲದೆ, “ಪ್ರತಿದಿನವೂ ನನಗೆ ಸವಾಲಿನ ದಿನವೇ. ಜನರ ಕಷ್ಟಗಳನ್ನು ಬಗೆಹರಿಸುವಾಗ ಟೀಕೆಗಳು ಸಹಜ, ಅದನ್ನು ಎದುರಿಸಿಯೇ ಕೆಲಸ ಮಾಡಬೇಕು” ಎಂದು ವಿಶ್ವಾಸ ವ್ಯಕ್ತಪಡಿಸಿದರು.

Exit mobile version