ದೈವಾರಾಧನೆಗೆ ಅವಮಾನ: ಬಾಲಿವುಡ್ ನಟ ರಣವೀರ್ ಸಿಂಗ್‌ಗೆ ಹೈಕೋರ್ಟ್‌ನಿಂದ ಮತ್ತಷ್ಟು ದಿನ ರಿಲೀಫ್!

Ranvir Singh Daivaradhane insult case: ಬೆಂಗಳೂರು: ದೈವಾರಾಧನೆಯ ಸಂಪ್ರದಾಯವನ್ನು ಅಣಕಿಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಮಾರ್ಚ್ 9ರವರೆಗೆ ನಟನ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಹೈಕೋರ್ಟ್ ಸೂಚಿಸಿದೆ.

ಏನಿದು ಪ್ರಕರಣ?

ಕಳೆದ ವರ್ಷ ಗೋವಾದಲ್ಲಿ ನಡೆದ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (IFFI), ರಣವೀರ್ ಸಿಂಗ್ ಅವರು ಕನ್ನಡದ ನಟ-ನಿರ್ದೇಶಕ ರಿಷಬ್ ಶೆಟ್ಟಿ ಅವರ ಎದುರು ಪಂಜುರ್ಲಿ/ಗುಳಿಗ ದೈವದ ಅಭಿವ್ಯಕ್ತಿಗಳನ್ನು ಅಣಕಿಸುವ ರೀತಿಯಲ್ಲಿ ವರ್ತಿಸಿದ್ದರು ಎನ್ನಲಾಗಿತ್ತು. ಈ ಮೂಲಕ ಪವಿತ್ರ ದೈವ ಸಂಪ್ರದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ವಕೀಲ ಪ್ರಶಾಂತ್ ಮೆಥಾಲ್ ಅವರು ಖಾಸಗಿ ದೂರು ದಾಖಲಿಸಿದ್ದರು.

ದೂರಿನ ಅನ್ವಯ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ರಣವೀರ್ ಸಿಂಗ್ ವಿರುದ್ಧ ಎಫ್‌ಐಆರ್ (FIR) ದಾಖಲಾಗಿತ್ತು. ಈ ಎಫ್‌ಐಆರ್ ರದ್ದು ಕೋರಿ ರಣವೀರ್ ಸಿಂಗ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ನ್ಯಾಯಾಲಯದಲ್ಲಿ ನಡೆದಿದ್ದೇನು?

ಫೆಬ್ರವರಿ 24ರಂದು ನೀಡಿದ್ದ ತಡೆಯಾಜ್ಞೆಯನ್ನು ಮಾರ್ಚ್ 9ರವರೆಗೆ ವಿಸ್ತರಿಸಲಾಗಿದೆ. ಪೊಲೀಸರು ರಣವೀರ್ ಸಿಂಗ್ ವಿರುದ್ಧ ಯಾವುದೇ ಬಲವಂತದ ಕ್ರಮ (Coercive Action) ಕೈಗೊಳ್ಳುವಂತಿಲ್ಲ. ಕಲಾತ್ಮಕ ಅಭಿವ್ಯಕ್ತಿ ಮತ್ತು ಧಾರ್ಮಿಕ ಭಾವನೆಗಳ ನಡುವಿನ ಸಂಘರ್ಷದ ರೂಪದಲ್ಲಿ ಈ ಪ್ರಕರಣ ಭಾರಿ ಕುತೂಹಲ ಮೂಡಿಸಿದೆ.

    Exit mobile version