ರಂಜಾನ್​ ನಿಮಿತ್ತ ಉರ್ದು ಶಾಲೆಗಳ ತರಗತಿ ಅವಧಿ ಪರಿಷ್ಕರಣೆ : ಮಧ್ಯಾಹ್ನದವರೆಗೆ ಮಾತ್ರ ತರಗತಿ

ಫೆಬ್ರವರಿ 17ರಿಂದ ಆರಂಭಗೊಳ್ಳಲಿರುವ ಪವಿತ್ರ ರಂಜಾನ್​ ಮಾಸದ ಉಪವಾಸ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾ ಉರ್ದು ಶಾಲೆಗಳ ಸಮಯ ಬದಲಾವಣೆಗೊಳಿಸಿ ಆದೇಶ ಹೊರಡಿಸಿದೆ. ಉರ್ದು ಕಿರಿಯ ಪ್ರಾಥಮಿಕ ಹಾಗೂ ಮಾಧ್ಯಮಿಕ ಶಾಲೆಗಳ ಅವಧಿಯನ್ನು ಬೆಳಗ್ಗೆ 8 ರಿಂದ ಮಧ್ಯಾಹ್ನ 12.45ರವೆಗೆ ಸೀಮಿತಗೊಳಿಸಿ ಸುತ್ತೋಲೆ ಹೊರಡಿಸಲಾಗಿದೆ. ಇದು ಮಾರ್ಚ್ 20ರವರೆಗೆ ಅನ್ವಯವಾಗಲಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಪಠ್ಯಕ್ರಮಗಳನ್ನು ಪೂರ್ಣಗೊಳಿಸಲು ಇತರೆ ದಿನಗಳು ಅಥವಾ ರಜಾ ದಿನಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಿ ಸರಿದೂಗಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಮಾತ್ರವಲ್ಲದೇ ರಂಜಾನ್​ ಉಪವಾಸದಲ್ಲಿರುವ ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಉಪವಾಸದ ವೇಳೆ 30 ನಿಮಿಷಕ್ಕೂ ಮೊದಲು ಶಾಲೆಯಿಂದ ಹೊರಡಲು ಅವಕಾಶ ನೀಡಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಸಿಬಿಎಸ್‌ಇ 10 ಮತ್ತು 12ನೇ ತರಗತಿ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ: ವಿದ್ಯಾರ್ಥಿಗಳಿಗೆ ಸಂಪೂರ್ಣ ಮಾಹಿತಿ

2025-26ನೇ ಸಾಲಿನ ಎಸ್​.ಎಸ್​.ಎಲ್​ಸಿ ಪರೀಕ್ಷಾ ಕೇಂದ್ರ ಹಾಗೂ ಪರೀಕ್ಷೆಯಲ್ಲಿ ಕರ್ತವ್ಯ ನಿರತ ಉರ್ದು ಮಾಧ್ಯಮದ ಶಿಕ್ಷಕರಿಗೆ ಈ ನಿಯಮ ಅನ್ವಯ ಆಗುವುದಿಲ್ಲ ಎಂದು ರಾಜ್ಯ ಶಿಕ್ಷಣ ಇಲಾಖೆ ತಿಳಿಸಿದೆ.

Exit mobile version