ನ್ಯಾಶನಲ್‌ ಫಾರೆನ್ಸಿಕ್‌ ಸೈನ್ಸ್‌ ಯೂನಿವರ್ಸಿಟಿ ನೇಮಕಾತಿ ಆರಂಭ: ಜನವರಿ 18ರೊಳಗೆ ಅರ್ಜಿ ಸಲ್ಲಿಸಿ

NFSU Recruitment 2025: ಸರ್ಕಾರಿ ನೌಕರಿಯ ಹುಡುಕಾಟದಲ್ಲಿರುವವರಿಗೆ ಸಂತೋಷದ ವಿಷಯವಿದೆ. ಅದೇನೆಂದರೆ ನ್ಯಾಶನಲ್‌ ಫಾರೆನ್ಸಿಕ್‌ ಸೈನ್ಸ್‌ ಯೂನಿವರ್ಸಿಟಿ (NFSU) ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ.

ಸೈಂಟಿಫಿಕ್‌ ಆಫೀಸರ್‌, ಲ್ಯಾಬೋರೇಟರಿ ಅಸಿಸ್ಟಂಟ್‌ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಈ ನೇಮಕಾತಿ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದ್ದು ಜನವರಿ 18, 2026 ರವರಗೆ ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತ, ಅರ್ಹ ಅಭ್ಯರ್ಥಿಗಳು ಎನ್‌ಎಫ್‌ಎಸ್‌ಯು ದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಯಲ್ಲಿ ಪಾಲ್ಗೊಳ್ಳಲು ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆಗಳೇನು ಎಂದು ತಿಳಿಯೋಣ.

ಹುದ್ದೆಯ ವಿವರ

ಈ ನೇಮಕಾತಿಯ ಮೂಲಕ ಎನ್‌ಎಫ್‌ಎಸ್‌ಯು ಒಟ್ಟು 30 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಹುದ್ದೆವಾರು ನೇಮಕಾತಿ ವಿವರಗಳು ಹೀಗಿವೆ:

ವಯೋಮಿತಿ

ಈ ನೇಮಕಾತಿಯಲ್ಲಿ ಪಾಲ್ಗೊಳ್ಳಲು ಹುದ್ದೆಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ವಿದ್ಯಾರ್ಹತೆ ಮತ್ತು ವಯೋಮಿತಿಯ ಸಂಪೂರ್ಣ ಮಾಹಿತಿಗಾಗಿ ನೇಮಕಾತಿ ಅಧಿಸೂಚನೆಯನ್ನು ಪರಿಶೀಲಿಸಲು ಅಭ್ಯರ್ಥಿಗಳು ಇಲ್ಲಿ ಕ್ಲಿಕ್ಕಿಸಿ.

ಅರ್ಜಿ ಶುಲ್ಕ

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಭರಿಸಬೇಕಾಗಿದೆ. ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿ ಸಲ್ಲಿಸಬಹುದು. ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ಅರ್ಜಿ ನಮೂನೆಯೊಂದಿಗೆ ₹500 ಶುಲ್ಕವನ್ನು ಪಾವತಿಸಬೇಕು. ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಬಿಡಿ/ಮಹಿಳಾ ಅಭ್ಯರ್ಥಿಗಳು ಈ ನೇಮಕಾತಿಗೆ ಉಚಿತವಾಗಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: CBSE Recruitment 2025: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯಿಂದ ಗ್ರೂಪ್ ಎ, ಬಿ ಮತ್ತು ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ ಹೇಗೆ?

Exit mobile version