ಎಸ್‌ಎಸ್‌ಎಲ್‌ಸಿ ಪಾಸಾದ್ರೆ ಸಾಕು ಆರ್‌ಬಿಐನಲ್ಲಿ ಕೆಲಸ ಮಾಡುವ ಸುವರ್ಣಾವಕಾಶ!

RBI Office Attendant Vacancy: ಬ್ಯಾಂಕಿಂಗ್‌ ಕ್ಷೇತ್ರದ ಅತ್ಯುನ್ನತ ಬ್ಯಾಂಕ್‌ ಭಾರತೀಯ ರಿಸರ್ವ್‌ ಬ್ಯಾಂಕ್‌ನಲ್ಲಿ ಕೆಲಸ ಮಾಡಬೇಕೆಂದು ಕನಸು ಕಾಣುತ್ತಿರುವವರಿಗೆ ಈಗ ಉತ್ತಮ ಅವಕಾಶವಿದೆ.

ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಆಫೀಸ್‌ ಅಟೆಂಡೆಂಟ್‌ ಹುದ್ದೆಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಇದರ ಮೂಲಕ ದೇಶಾದ್ಯಂತ ತನ್ನ ವಿವಿಧ ಕಚೇರಿಗಳಲ್ಲಿ ಖಾಲಿ ಇರುವ ಒಟ್ಟು 572 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆರ್‌ಬಿಐ ನ ಅಧಿಕೃತ ವೆಬ್‌ಸೈಟ್ rbi.org.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಹುದ್ದೆಗೆ ಅರ್ಜಿ ಸಲ್ಲಿಸಲು ಮತ್ತು ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕವನ್ನು ಫೆಬ್ರವರಿ 4, 2026 ಎಂದು ನಿಗದಿಪಡಿಸಲಾಗಿದೆ.

ಯಾರು ಅರ್ಜಿ ಸಲ್ಲಿಸಬಹುದು?

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶದ ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿ (ಮೆಟ್ರಿಕ್ಯುಲೇಷನ್) ಉತ್ತೀರ್ಣರಾಗಿರಬೇಕು. ಪದವಿ ಅಥವಾ ಅದಕ್ಕಿಂತ ಹೆಚ್ಚಿನ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ ಎಂಬುದನ್ನು ಗಮನದಲ್ಲಿಡಿ.

ವಯೋಮಿತಿ ಎಷ್ಟು?

ಆರ್‌ಬಿಐನ ಆಫಿಸ್‌ ಅಟೆಂಡೆಂಟ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷಗಳು ಹಾಗೂ ಗರಿಷ್ಠ ವಯೋಮಿತಿ 25 ವರ್ಷಗಳು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ.

ಇದನ್ನೂ ಓದಿ: ನಮ್ಮ ಮೆಟ್ರೋ ನೇಮಕಾತಿ 2026: ಬೆಂಗಳೂರು ಮೆಟ್ರೋದಲ್ಲಿ ಉದ್ಯೋಗಾವಕಾಶ; ಇಲ್ಲಿ ಅರ್ಜಿ ಸಲ್ಲಿಸಿ

ಭಾಷಾ ಜ್ಞಾನ

ಅಭ್ಯರ್ಥಿಗಳು ಅರ್ಜಿ ಸಲ್ಲಿಸುತ್ತಿರುವ ರಾಜ್ಯ ಅಥವಾ ಪ್ರದೇಶದ ಸ್ಥಳೀಯ ಭಾಷೆಯ ಜ್ಞಾನವನ್ನು ಹೊಂದಿರಬೇಕು. ಸ್ಥಳೀಯ ಭಾಷೆಯನ್ನು ಓದುವುದು, ಬರೆಯುವುದು, ಮಾತನಾಡುವುದು ಮತ್ತು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಇರುವುದು ಅತ್ಯಗತ್ಯವಾಗಿದೆ.

ಅರ್ಜಿ ಸಲ್ಲಿಕೆ ಹೇಗೆ?

Exit mobile version