ಎಸ್‌ಬಿಐ ಸ್ಪೆಷಲಿಸ್ಟ್‌ ಆಫೀಸರ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ: ಆಸಕ್ತ ಅಭ್ಯರ್ಥಿಗಳು ತಕ್ಷಣ ಅರ್ಜಿ ಸಲ್ಲಿಸಿ

SBI SO Recruitment 2026: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಸ್ಪೆಷಲಿಸ್ಟ್ ಆಫೀಸರ್ (SO) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕವನ್ನು ವಿಸ್ತರಿಸಿದೆ.

ಕೆಲವು ಕಾರಣಗಳಿಂದ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗದ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಈ ನೇಮಕಾತಿ ಮೂಲಕ ಎಸ್‌ಬಿಐ ಒಟ್ಟು 996 ಸ್ಪೆಷಲಿಸ್ಟ್‌ ಆಫೀಸರ್‌ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಅಭ್ಯರ್ಥಿಗಳು SBI ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಜನವರಿ 10 ರವರೆಗೆ ವಿಸ್ತರಿಸಲಾಗಿದೆ. ಆದ್ದರಿಂದ, ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನದ ಮೊದಲು ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಯಾರು ಅರ್ಜಿ ಸಲ್ಲಿಸಬಹುದು?

ಎಸ್‌ಬಿಐನ ಸ್ಪೆಷಲಿಸ್ಟ್‌ ಆಫೀಸರ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಪದವಿ ಪಡೆದಿರಬೇಕು.

ವಯೋಮಿತಿ ಎಷ್ಟು?

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷಗಳು ಹಾಗೂ ಗರಿಷ್ಠ ವಯಸ್ಸು 42 ವರ್ಷಗಳು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ.

ಅರ್ಜಿ ಶುಲ್ಕ ಎಷ್ಟು?

ಎಸ್‌ಬಿಐ ಸ್ಪೆಷಲಿಸ್ಟ್‌ ಆಫೀಸರ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಲ್ಲಾ ಅಭ್ಯರ್ಥಿಗಳು ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ಅಭ್ಯರ್ಥಿಗಳು ₹750 ಅರ್ಜಿ ಶುಲ್ಕವನ್ನು ಪಾವತಿಸಬೇಕು. ಆದರೆ ಎಸ್‌ಸಿ, ಎಸ್‌ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಶುಲ್ಕವಿಲ್ಲದೇ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: ಪರೀಕ್ಷೆಯಿಲ್ಲದೆ ತಿಂಗಳಿಗೆ 3.85 ಲಕ್ಷದವರೆಗೆ ಸಂಬಳದ ಕೆಲಸ; ಇಲ್ಲಿ ಅಪ್ಲೈ ಮಾಡಿ

ಅರ್ಜಿ ಸಲ್ಲಿಕೆ ಹೇಗೆ?

ಎಸ್‌ಬಿಐ ಸ್ಪೆಷಲಿಸ್ಟ್ ಆಫೀಸರ್ (ಎಸ್‌ಒ) ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿದೆ. ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಈ ಕೆಳಗಿನ ಸರಳ ಹಂತಗಳನ್ನು ಪಾಲಿಸಿ.

Exit mobile version