CM Siddaramaiah show of strength: ನಾಳೆ ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಶಕ್ತಿಪ್ರದರ್ಶನ : ಬಿಜೆಪಿ ಭದ್ರಕೋಟೆಯಲ್ಲಿ ಕಾಂಗ್ರೆಸ್​ ಕಲರವ

CM Siddaramaiah show of strength: ರಾಜ್ಯದಲ್ಲಿ ಅಧಿಕಾರ ಹಸ್ತಾಂತರದ ಹಾವು ಏಣಿ ಆಟ ನಡೆಯುತ್ತಿರುವ ಬೆನ್ನಲ್ಲೇ ಬಿಜೆಪಿ(BJP) ಭಧ್ರಕೋಟೆ ಎನಿಸಿರುವ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ನಾಳೆ ಮಂಗಳೂರಿನಲ್ಲಿ ನಾರಾಯಣ ಗುರು-ಗಾಂಧಿ ಐತಿಹಾಸಿಕ ಸಂವಾದದ ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದ್ದು ರಾಷ್ಟ್ರೀಯ ಕಾಂಗ್ರೆಸ್​ ಮುಖಂಡ ಕೆಸಿ ವೇಣುಗೋಪಾಲ್​ ಅವರೊಂದಿಗೆ ಸಿದ್ದರಾಮಯ್ಯ ವೇದಿಕೆ ಹಂಚಿಕೊಳ್ಳಲಿದ್ದಾರೆ.

ಈ ಕಾರ್ಯಕ್ರಮ ಆಯೋಜನೆಯ ನೇತೃತ್ವವನ್ನು ಶಾಸಕ ಯು.ಟಿ ಖಾದರ್​ ಹಾಗೂ ಬಿ.ಕೆ ಹರಿಪ್ರಸಾದ್​ಗೆ ನೀಡಲಾಗಿದೆ ಎನ್ನಲಾಗಿದ್ದು ಸಾಕಷ್ಟು ಜನರನ್ನು ಸಮಾವೇಶಕ್ಕೆ ಸೇರಿಸುವಂತೆ ಜಿಲ್ಲಾ ಕಾಂಗ್ರೆಸ್​ಗೆ ಸೂಚನೆ ನೀಡಲಾಗಿದೆ. ಬಿಜೆಪಿ ಭದ್ರಕೋಟೆಯಲ್ಲಿ ತಮ್ಮ ಶಕ್ತಿ ಪ್ರದರ್ಶನದ ಮೂಲಕ ಹೈಕಮಾಂಡ್​ಗೆ ಸಂದೇಶ ಕಳುಹಿಸಲು ಸಿದ್ದರಾಮಯ್ಯ ಮುಂದಾಗಿದ್ದಾರೆ ಎನ್ನಲಾಗಿದೆ.

ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಬೆಳಗ್ಗೆ 11 ಗಂಟೆಗೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ, 11:40ಕ್ಕೆ ಉಳ್ಳಾಲ ತಾಲೂಕಿನ ಕೊಣಾಜೆ ಮಂಗಳ ಗಂಗೋತ್ರಿಯಲ್ಲಿ ಶತಮಾನದ ಪ್ರಸ್ತಾನ ಶ್ರೀ ನಾರಾಯಣ ಗುರು ಹಾಗೂ ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ , ಶ್ರೀ ಗುರುವಿನ ಮಹಾ ಸಮಾಧಿ ಶತಾಬ್ದಿ, ಸರ್ವಮತ ಸಮ್ಮೇಳನದ ಶತಮಾನೋತ್ಸವ ಹಾಗೂ ಯತಿ ಪೂಜೆ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

Also Read: ಮಟನ್​ಗಿಂತಲೂ ಹೆಚ್ಚಾಯ್ತು ನುಗ್ಗೆಕಾಯಿ ದರ : ಕೆಜಿ ನುಗ್ಗೆಕಾಯಿ ಈಗ 600 ರೂಪಾಯಿ..!

ಒಂದಾದ ಬಳಿಕ 12:30ಲ್ಲೆ ಪೇಸ್ ಮತ್ತು ಎ.ಐ ಉನ್ನತ ಅಧ್ಯಯನ ಕೇಂದ್ರದ ಶಿಲಾನ್ಯಾಸ,ಪೇಸ್ ಟ್ರೈಡ್ ಪಾರ್ಕ್ ಮತ್ತು ಪೇಸ್ ಸ್ಪೋಟ್ರ್ಸ್ ಅರೆನಾ ಇದರ ಶಿಲಾನ್ಯಾಸ ಹಾಗೂ ಪೇಸ್‍ಕೇರ್ಸ್ ಸಮುದಾಯ ಸೇವಾ ಯೋಜನೆಗಳು ಉದ್ಘಾಟನಾ ಸಮಾರಂಭವನ್ನು ನೆರವೇರಿಸಲಿದ್ದಾರೆ.

ಮಧ್ಯಾಹ್ನ 1:15ಕ್ಕೆ ನಗರದ ಮಂಗಳೂರಿನ ಸರ್ಕ್ಯೂಟ್ ಹೌಸ್‍ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ವಕೀಲರ ಬಾರ್ ಅಸೋಸಿಯೇಷನ್‍ ಭೇಟಿ ಮಾಡಿ ಬಳಿಕ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಂಜೆ 4:30ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಮರಳಲಿದ್ದಾರೆ.

Exit mobile version