ಮುಡಾ ಹಗರಣ: ಸಿಎಂ ಆಪ್ತ ಮರೀಗೌಡರ 20 ಕೋಟಿ ಮೌಲ್ಯದ 10 ಸ್ಥಿರ ಆಸ್ತಿಗಳು ಮುಟ್ಟುಗೋಲು

MUDA Scam | CM Siddaramaiah: ಮೈಸೂರು/ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ತನ್ನ ಬಿಗಿಹಿಡಿತವನ್ನು ಮುಂದುವರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತ ಹಾಗೂ ಮುಡಾ ಮಾಜಿ ಅಧ್ಯಕ್ಷ ಮರೀಗೌಡ ಅವರಿಗೆ ಸೇರಿದ ೨೦ ಕೋಟಿ ಮೌಲ್ಯದ 10 ಸ್ಥಿರ ಆಸ್ತಿಗಳನ್ನು ಇ.ಡಿ ಅಧಿಕಾರಿಗಳು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ತನಿಖೆಯಲ್ಲಿ ಬಯಲಾದ ಅಕ್ರಮ

ಮರೀಗೌಡ ಅವರು ಮುಡಾ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಅಕ್ರಮವಾಗಿ ನಿವೇಶನಗಳನ್ನು ಪಡೆದಿರುವುದು ಇಡಿ ತನಿಖೆಯಲ್ಲಿ ದೃಢಪಟ್ಟಿದೆ. ಜೈಲು ಪಾಲಾಗಿರುವ ಮುಡಾ ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಅವರ ಸಹಕಾರದೊಂದಿಗೆ ಮರೀಗೌಡ ಈ ಅಕ್ರಮ ಎಸಗಿದ್ದಾರೆ ಎಂಬ ಗಂಭೀರ ಅಂಶ ಬೆಳಕಿಗೆ ಬಂದಿದೆ. ಈ ಹಿಂದೆ ನಡೆದ ದಾಳಿಯ ವೇಳೆ ದೊರೆತ ದಾಖಲೆಗಳನ್ನು ಪರಿಶೀಲಿಸಿದಾಗ ಸೈಟ್ ಹಂಚಿಕೆಯಲ್ಲಿ ಭಾರೀ ಅಕ್ರಮ ನಡೆದಿರುವುದು ಸಾಬೀತಾಗಿದೆ.

ಜಪ್ತಿಯಾದ ಆಸ್ತಿಗಳ ವಿವರ

ಇಡಿ ಅಧಿಕಾರಿಗಳು ಮರೀಗೌಡಗೆ ಸೇರಿದ ಒಟ್ಟು 10 ಸ್ಥಿರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದು, ಅವುಗಳಲ್ಲಿ ಈ ಕೆಳಗಿನವು ಸೇರಿವೆ:

ಹಗರಣದ ಒಟ್ಟು ಮೌಲ್ಯ ಮತ್ತು ಕಾನೂನು ಪ್ರಕ್ರಿಯೆ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಇದುವರೆಗೆ ಒಟ್ಟು 283 ಮುಡಾ ನಿವೇಶನಗಳು ಮತ್ತು 3 ವೈಯಕ್ತಿಕ ಆಸ್ತಿ ಸೇರಿದಂತೆ ಅಂದಾಜು 60 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ. ಜೊತೆಗೆ, ಪ್ರಕರಣದ ಪ್ರಮುಖ ಆರೋಪಿ, ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ನಿನ್ನೆಯಷ್ಟೇ ವಜಾಗೊಳಿಸಿದೆ.

Makara Jyoti: ರಾಜ್ಯದಲ್ಲಿ ಹಿಂದೆಂದೂ ಕಾಣದ ಪವಾಡ ಅಂಕೋಲಾದಲ್ಲಿ; ಬೆಟ್ಟದ ತುದಿಯಲ್ಲಿ ಬೆಳಕಲ್ಲ ʼದರ್ಶನ!ʼ

ತೀರ್ಪು ಕಾಯ್ದಿರಿಸಿದ ಕೋರ್ಟ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ನೀಡಿದ್ದ ‘ಬಿ’ ರಿಪೋರ್ಟ್ ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಂಡಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜನವರಿ 28ಕ್ಕೆ ತನ್ನ ಆದೇಶವನ್ನು ಕಾಯ್ದಿರಿಸಿದೆ. ಮುಡಾ ಹಗರಣದ ತನಿಖೆ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಸಿಎಂ ಆಪ್ತವಲಯದ ಆಸ್ತಿ ಮುಟ್ಟುಗೋಲು ಪ್ರಕ್ರಿಯೆಯು ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ.

Exit mobile version