Gruhalaskhmi : ಗೃಹಲಕ್ಷ್ಮೀ ಯೋಜನೆ : ಗೃಹಿಣಿಯರಿಗೆ ಭರ್ಜರಿ ಗುಡ್‌ನ್ಯೂಸ್‌

ಬೆಂಗಳೂರು : ಕರ್ನಾಟಕ ಸರಕಾರ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆ (Gruhalaskhmi) ಫಲಾನುಭವಿಗಳಿಗೆ ಗುಡ್‌ನ್ಯೂಸ್‌ ಸಿಕಿದೆ. 3 ತಿಂಗಳ ಬಾಕಿ ಹಣ ಒಟ್ಟಿಗೆ ಜಮೆ ಆಗಿದೆ.

ತಾಂತ್ರಿಕ ಮತ್ತು ಆಡಳಿತಾತ್ಮಕ ಕಾರಣಗಳಿಂದಾಗಿ ಕಳೆದ ಮೂರು ತಿಂಗಳ ಹಣ ಬಿಡುಗಡೆ ವಿಳಂಬವಾಗಿತ್ತು. ಈ ತಡೆ ನಿವಾರಣೆಯಾದ ಹಿನ್ನೆಲೆಯಲ್ಲಿ, ಏಕಕಾಲಕ್ಕೆ ಹಣ ಬಿಡುಗಡೆ ಮಾಡಿರುವುದು ಲಕ್ಷಾಂತರ ಕುಟುಂಬಗಳಿಗೆ ಆರ್ಥಿಕವಾಗಿ ನೆಮ್ಮದಿ ಸಿಕ್ಕಿದೆ.

ಬೆಂಗಳೂರು, ಮೈಸೂರು, ಹುಬ್ಬಳ್ಳಿ ಸೇರಿದಂತೆ ರಾಜ್ಯದಾದ್ಯಂತ ಬಹುತೇಕ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಏಕಕಾಲದಲ್ಲಿ ಹಣ ಜಮೆಯಾಗಿದೆ. ಪ್ರತಿ ತಿಂಗಳು ₹2,000 ಗಳಂತೆ, ಬಾಕಿ ಉಳಿದಿದ್ದ ಒಟ್ಟು ₹6,000 ರೂಪಾಯಿಗಳು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆಯಾಗಿದೆ.

ಹಣವು ಕುಟುಂಬದ ದೈನಂದಿನ ಅವಶ್ಯಕತೆಗಳು, ಮಕ್ಕಳ ವಿದ್ಯಾಭ್ಯಾಸದ ಖರ್ಚು ಮತ್ತು ಆರೋಗ್ಯ ಸೇವೆಗಳಿಗೆ ನೆರವಾಗಲಿದೆ ಎಂದು ಹಲವು ಫಲಾನುಭವಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉನ್ನತ ಅಧಿಕಾರಿಗಳು, “ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಯಾವುದೇ ಅರ್ಹ ಫಲಾನುಭವಿಗೆ ಹಣ ತಲುಪದೇ ಇರಬಾರದು ಎಂಬುದು ನಮ್ಮ ಉದ್ದೇಶ.

ಇದನ್ನೂ ಓದಿ : ಆದಾಯ ತೆರಿಗೆದಾರರ ಗಮನಕ್ಕೆ : ಐಟಿಆರ್‌ ರಿಟರ್ನ್ಸ್‌ ಅವಧಿ ವಿಸ್ತರಣೆ

ಮುಂದಿನ ದಿನಗಳಲ್ಲಿ ಯೋಜನೆಯ ( Gruhalaskhmi ) ಹಣವು ಪ್ರತಿ ತಿಂಗಳು ಸಕಾಲದಲ್ಲಿ ಜಮೆಯಾಗಲಿದೆ” ಎಂದು ಸ್ಪಷ್ಟಪಡಿಸಿದ್ದಾರೆ. ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಿಕೊಳ್ಳುವಂತೆ ಸೂಚಿಸಲಾಗಿದೆ. ಸರ್ಕಾರದ ಈ ಕ್ರಮವು ಯೋಜನೆಯ ವಿಶ್ವಾಸಾರ್ಹತೆ ಮತ್ತಷ್ಟು ಹೆಚ್ಚಿಸಿದೆ.

ನಿಮ್ಮ ಖಾತೆಗೆ ಗೃಹಲಕ್ಷ್ಮೀ ಹಣ ಜಮೆ ಆಗಿದ್ಯಾ ? ಡಿಬಿಟಿ (DBT) ಚೆಕ್‌ ಮಾಡಿ

ಇದನ್ನೂ ಓದಿ : ಆಧಾರ್‌ ಕಾರ್ಡ್‌ ಇದ್ದರೆ ಸಿಗುತ್ತೆ 50 ಸಾವಿರ ರೂಪಾಯಿ ಸಾಲ

Exit mobile version