ರಾಜ್ಯ ರಾಜಧಾನಿಯಲ್ಲಿ ಅಮಾನವೀಯ ಕೃತ್ಯ: ರಸ್ತೆ ಬದಿಯ ಹಸುವಿನ ಮೇಲೆ ಲೈಂ*ಗಿಕ ದೌರ್ಜನ್ಯ, ವಿಡಿಯೋ ವೈರಲ್‌

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಪೂರ್ಣ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಘನಘೋರ ಘಟನೆಯೊಂದು ಬೆಳಕಿಗೆ ಬಂದಿದೆ. ಹೌದು..! ಕಾಟನ್ಪೇಟೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಇದಾಗಿದ್ದು, ವಿಕೃತ ಕಾಮಿಯೊಬ್ಬ ರಸ್ತೆ ಬದಿಯಲ್ಲಿ ನಿಂತಿದ್ದ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಪೂರ್ಣ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಘನಘೋರ ಘಟನೆಯೊಂದು ಬೆಳಕಿಗೆ ಬಂದಿದೆ. ಹೌದು..! ಕಾಟನ್ಪೇಟೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಇದಾಗಿದ್ದು, ವಿಕೃತ ಕಾಮಿಯೊಬ್ಬ ರಸ್ತೆ ಬದಿಯಲ್ಲಿ ನಿಂತಿದ್ದ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಘಟನೆಯ ಸಂಪೂರ್ಣ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಮೇ 5ರ ತಡರಾತ್ರಿ ಈ ಘಟನೆ ಸಂಭವಿಸಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ದ್ವಿಚಕ್ರ ವಾಹನದಲ್ಲಿ ಬಂದಿದ್ದ ಕಾಮುಕ, ರಸ್ತೆಬದಿಯಲ್ಲಿ ನಿಂತಿದ್ದ ಹಸುವಿನ ಮೇಲೆ ಅತ್ಯಾಚಾರ ಎಸಗಿ ಎಸ್ಕೇಪ್​ ಆಗಿದ್ದಾನೆ. ಸಿಸಿ ಕ್ಯಾಮರಾದಲ್ಲಿ ಆತನ ದ್ವಿಚಕ್ರ ವಾಹನದ ನಂಬರ್​ ಸೆರೆಯಾಗಿದ್ದು, ನಾಪತ್ತೆಯಾಗಿರುವ ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.

Also Read: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ: ಸಿಡಿಲಿಗೆ ಮೂವರು ಬಲಿ, ಶಿವಮೊಗ್ಗದಲ್ಲಿ ರೈಲು ಸಂಚಾರ ಅಸ್ತವ್ಯಸ್ತ

ಸದ್ಯ ಆರೋಪಿಯ ವಿರುದ್ಧ ಪೊಲೀಸರು ಸುಮೋಟೋ ಕೇಸ್​ ದಾಖಲಿಸಿಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದ್ದಂತೆಯೇ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದ್ದು, ಕಾಮುಕ ಆರೋಪಿಗೆ ಘನಘೋರ ಶಿಕ್ಷೆ ವಿಧಿಸುವಂತೆ ಆಗ್ರಹ ಕೇಳಿಬಂದಿದೆ.

Inhuman act in state capital Sexual assault on roadside cow video goes viral

Exit mobile version