Karnataka Rain Alert: ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ; ಸಿಲಿಕಾನ್ ಸಿಟಿಯಲ್ಲಿ ‘ಯೆಲ್ಲೋ ಅಲರ್ಟ್’

ಸದ್ಯ ಮುಂಗಾರು ಪೂರ್ವ ಮಳೆಯ ಅಬ್ಬರ ಜೋರಾಗಿದ್ದು, ಮುಂದಿನ ದಿನಗಳಲ್ಲಿ ಬಾರೀ ಮಳೆ ಸುರಿಯಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಸಿಲಿಕಾನ್‌ ಸಿಟಿ ಬೆಂಗಳೂರಿನ ಕೆಲವು ಕಡೆಗಳಲ್ಲಿ ಮಳೆ ತಂಪೆರೆದಿದ್ದು, ಕರ್ನಾಟಕದ ಹಲವೆಡೆ ಮಳೆ ಮುಂದುವರಿಯುವ ಮುನ್ಸೂಚನೆ ದೊರೆತಿದೆ.

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಸಿಲಿಕಾನ್‌ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಮುಂದಿನ ನಾಲ್ಕು ದಿನಗಳ ಕಾಲ ವಾತಾವರಣದಲ್ಲಿ ಬಾರೀ ಏರುಪೇರು ಉಂಟಾಗಲಿದೆ. ಭಾರತೀಯ ಹವಾಮಾನ ಇಲಾಖೆ ನೀಡಿದ ಮುನ್ಸೂಚನೆಯ ಬೆಂಗಳೂರಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಸದ್ಯ ಮುಂಗಾರು ಪೂರ್ವ ಮಳೆಯ ಅಬ್ಬರ ಜೋರಾಗಿದ್ದು, ಮುಂದಿನ ದಿನಗಳಲ್ಲಿ ಬಾರೀ ಮಳೆ ಸುರಿಯಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಸಿಲಿಕಾನ್‌ ಸಿಟಿ ಬೆಂಗಳೂರಿನ ಕೆಲವು ಕಡೆಗಳಲ್ಲಿ ಮಳೆ ತಂಪೆರೆದಿದ್ದು, ಕರ್ನಾಟಕದ ಹಲವೆಡೆ ಮಳೆ ಮುಂದುವರಿಯುವ ಮುನ್ಸೂಚನೆ ದೊರೆತಿದೆ.

ಬೆಂಗಳೂರಿಗೆ ಯೆಲ್ಲೋ ಅಲರ್ಟ್: ಸಂಜೆ ಮಳೆಯ ಆರ್ಭಟ

ಕಳೆದ ಕೆಲವು ದಿನಗಳಿಂದ ಸಂಜೆ ಅಥವಾ ರಾತ್ರಿಯ ಅವಧಿಯಲ್ಲಿ ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ಮುಂದಿನ 3 ರಿಂದ 4 ದಿನಗಳ ಕಾಲ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಜೋರಾಗಿ ಮಳೆಯಾಗಲಿದೆ.

ಮಳೆಯ ಜೊತೆಗೆ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ವಾಹನ ಸವಾರರು ಹಾಗೂ ತಗ್ಗು ಪ್ರದೇಶದ ನಿವಾಸಿಗಳು ಜಾಗರೂಕರಾಗಿರಬೇಕು ಎಂದು ಬಿಬಿಎಂಪಿ (BBMP) ಮತ್ತು ವಿಪತ್ತು ನಿರ್ವಹಣಾ ಮಂಡಳಿ ಎಚ್ಚರಿಕೆ ನೀಡಿದೆ.

Also Read : ‘ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ’: ಈ ದಾಖಲೆ ನೀಡದೆ ಇದ್ರೆ ಕ್ಯಾನ್ಸಲ್ ಆಗತ್ತೆ ವೋಟರ್ ಐಡಿ

ಈ ಜಿಲ್ಲೆಗಳಿಗೂ ಹೈ ಅಲರ್ಟ್: ಎಲ್ಲೆಲ್ಲಿ ಮಳೆಯಾಗಲಿದೆ ?

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಕೇವಲ ಬೆಂಗಳೂರು ಮಾತ್ರವಲ್ಲದೆ ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ.

Also Read : ಬಿಯರ್ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್‌ : ಬಿಯರ್‌ ಸವಿಯೋಕೆ ಗೋವಾಕ್ಕೆ ಹೋಗಬೇಕಿಲ್ಲ, ಕರ್ನಾಟಕದಲ್ಲಿ ಅಗ್ಗದ ಬಿಯರ್‌

ವಾಯುಭಾರ ಕುಸಿತ ಮತ್ತು ಮುಂಗಾರು ಪ್ರವೇಶ

ಬಂಗಾಳ ಕೊಲ್ಲಿಯ ನೈಋತ್ಯ ಭಾಗದಲ್ಲಿ ಉಂಟಾಗಿರುವ ಬಲವಾದ ವಾಯುಭಾರ ಕುಸಿತದ ಪರಿಣಾಮವಾಗಿ ಈ ಪ್ರೀ-ಮೂನ್ಸೂನ್ (Pre-Monsoon) ಮಳೆ ತೀವ್ರಗೊಂಡಿದೆ. ಇದೇ ವೇಳೆ, ನೈಋತ್ಯ ಮುಂಗಾರು (Southwest Monsoon) ಅಂಡಮಾನ್ ನಿಕೋಬಾರ್ ದ್ವೀಪಗಳು ಹಾಗೂ ಅರಬ್ಬೀ ಸಮುದ್ರದ ಕೆಲವು ಭಾಗಗಳಿಗೆ ನಿಗದಿತ ಸಮಯಕ್ಕಿಂತ ಮುಂಚಿತವಾಗಿಯೇ ಪ್ರವೇಶಿಸಿದೆ. ಮೇ 26ರ ಸುಮಾರಿಗೆ ಮುಂಗಾರು ಕೇರಳವನ್ನು ಪ್ರವೇಶಿಸಲಿದ್ದು, ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೆ ಅಧಿಕೃತವಾಗಿ ಮುಂಗಾರು ಮಳೆ ಕಾಲಿಡಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸದ್ಯ ಸುರಿಯುತ್ತಿರುವ ಮಳೆಯಿಂದಾಗಿ ಬೇಸಿಗೆ ಬೇಗೆಯಿಂದ ತತ್ತರಿಸಿದ್ದ ಜನರಿಗೆ ತಂಪೆರೆದಿದೆ. ಆದರೆ ದಿಢೀರ್ ಬಿರುಗಾಳಿ ಮತ್ತು ಸಿಡಿಲಿನ ಆರ್ಭಟ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಒಟ್ಟಿನಲ್ಲಿ ಮುಂದಿನ 4 ದಿನಗಳ ಕಾಲ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ವರುಣನ ಅಬ್ಬರ ಮುಂದುವರಿಯಲಿದ್ದು, ಜನರು ಮುನ್ನೆಚ್ಚರಿಕೆ ವಹಿಸುವುದು ಅನಿವಾರ್ಯವಾಗಿದೆ.

karnataka rain alert bengaluru yellow alert

Exit mobile version