ಗ್ರಾಮ ಪಂಚಾಯ್ತಿ ಸಿಬ್ಬಂದಿಗಳೇ ಗಮನಿಸಿ : ಶೀಘ್ರದಲ್ಲೇ ಆಗಲಿದೆ ನಿಮ್ಮ ವೇತನ ಹೆಚ್ಚಳ

ರಾಜ್ಯದಲ್ಲಿ ಗ್ರಾಮ ಪಂಚಾಯತಿ ಸಿಬ್ಬಂದಿಗೆ ಸಂಬಳ ಏರಿಕೆ ಮಾಡಬೇಕು ಎನ್ನುವುದು ಬಹುದಿನಗಳ ಬೇಡಿಕೆ. ಈ ಬೇಡಿಕೆಗೆ ಇದೀಗ ರಾಜ್ಯ ಸರ್ಕಾರ ಸಕಾರಾತ್ಮಕ ಸ್ಪಂದನೆ ನೀಡಿದೆ

ರಾಜ್ಯದಲ್ಲಿ ಗ್ರಾಮ ಪಂಚಾಯತಿ ಸಿಬ್ಬಂದಿಗೆ ಸಂಬಳ ಏರಿಕೆ ಮಾಡಬೇಕು ಎನ್ನುವುದು ಬಹುದಿನಗಳ ಬೇಡಿಕೆ. ಈ ಬೇಡಿಕೆಗೆ ಇದೀಗ ರಾಜ್ಯ ಸರ್ಕಾರ ಸಕಾರಾತ್ಮಕ ಸ್ಪಂದನೆ ನೀಡಿದೆ. ಈ ಪ್ರಸ್ತಾವನೆಗೆ ಅನುಮೋದನೆಗೊಳಿಸುವಂತೆ ಆರ್ಥಿಕ ಇಲಾಖೆಯೊಂದಿಗೆ ಮನವಿ ಮಾಡುವುದಾಗಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್​ರಾಜ್​ ಸಚಿವ ಪ್ರಿಯಾಂಕ್​ ಖರ್ಗೆ ಹೇಳಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್​ ಸದಸ್ಯ ಡಿ.ಟಿ ರಾಜೇಗೌಡ, ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಪ್ರಿಯಾಂಕ್​ ಖರ್ಗೆ, ಜ್ಯೇಷ್ಠತೆಯ ಆಧಾರದ ಮೇಲೆ ಗ್ರಾಮ ಪಂಚಾಯ್ತಿ ನೌಕರರ ವೇತನ ಹೆಚ್ಚಳ ಪ್ರಸ್ತಾವನೆ ಅಂಗೀಕರಿಸಲು ಆರ್ಥಿಕ ಇಲಾಖೆಯ ಮೇಲೆ ಒತ್ತಡ ಹೇರಲಾಗುವುದ ಎಂದು ಹೇಳಿದರು.

ಇದನ್ನೂ ಓದಿ: ದ್ವಿಚಕ್ರ ವಾಹನ ಪ್ರಯಾಣಿಕರಿಗೆ ಗುಡ್​​ನ್ಯೂಸ್​ : ನೈಸ್​ ರಸ್ತೆಗಳಲ್ಲಿ ಶೀಘ್ರದಲ್ಲೇ ಟೋಲ್​ ರದ್ದು

 

ಅಲ್ಲದೇ ಗ್ರಾಮ ಪಂಚಾಯ್ತಿ ನೌಕರರ ಕನಿಷ್ಠ ವೇತನ ಹೆಚ್ಚಿಸುವ ಪ್ರಸ್ತಾವನೆ ಕೂಡ ಸದ್ಯ ಕಾರ್ಮಿಕ ಇಲಾಖೆಯ ಪರಿಶೀಲನಾ ಹಂತದಲ್ಲಿದೆ. ಕಾರ್ಮಿಕ ಇಲಾಖೆಯು ಈಗಾಗಲೇ ಸಾರ್ವಜನಿಕರ ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನಿಸಿದೆ. ಅಂತಿಮ ಅಧಿಸೂಚನೆ ಕೆಲವೇ ದಿನಗಳಲ್ಲಿ ಹೊರಬೀಳಲಿದೆ ಎಂದು ಹೇಳಿದರು.

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »