ರಾಜ್ಯದಲ್ಲಿ ಮಿತಿಮೀರಿದ ಬಿರು ಬೇಸಿಲ ಬೇಗೆ : ಇಂದು ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೂರ್ಯನ ಝಳ ಹೆಚ್ಚುತ್ತಲೇ ಇದ್ದು ಜನಸಾಮಾನ್ಯರು ಹೈರಾಣಾಗಿದ್ದಾರೆ. ಅಧಿಕೃತವಾಗಿ ಬೇಸಿಗೆ ಆರಂಭಕ್ಕೂ ಮುನ್ನವೇ ತಾಪಮಾನ ಮಿತಿಮೀರಿದ್ದು ಏಪ್ರಿಲ್​ – ಮೇ ಅವಧಿಯಲ್ಲಿ ಪರಿಸ್ಥಿತಿ ಏನಾಗಬಹುದು ಎಂಬ ಆತಂಕದಲ್ಲಿದ್ದಾರೆ. ಈ ಎಲ್ಲದರ ನಡುವೆ ಮುಂದಿನ 48 ಗಂಟೆಗಳಲ್ಲಿ ತಾಪಮಾನ ಮತ್ತಷ್ಟು ಮಿತಿಮೀರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಉತ್ತರ ಕರ್ನಾಟಕದ ಕಲಬುರಗಿ, ಬಳ್ಳಾರಿ ಕಡೆಗಳಲ್ಲಿ ತಾಪಮಾನ 35 ಡಿಗ್ರಿ ಸೆಲ್ಸಿಯಸ್​ಗೂ ಅಧಿಕ ದಾಖಲಾಗಿದೆ. ಕರಾವಳಿ ಭಾಗದಲ್ಲಿಯೂ ತಾಪಮಾನ 30 ಡಿಗ್ರಿ ಸೆಲ್ಸಿಯಸ್​ವರೆಗೆ ತಲುಪಿದೆ. ಆದರೆ ಈ ಎಲ್ಲದರ ನಡುವೆ ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸಂಭವಿಸುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.

ಇದನ್ನೂ ಓದಿ: ತರಕಾರಿಯಲ್ಲಿ ಪತ್ತೆಯಾಯ್ತು ವಿಷಕಾರಿ ಸೀಸದ ಅಂಶ : ಬೆಂಗಳೂರಿಗರೇ ಎಚ್ಚರ ಎಚ್ಚರ..!

ವಿಜಯಪುರ, ಗದಗ, ಕೊಪ್ಪಳ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದು ಮಳೆ ಸಂಭವಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇನ್ನುಳಿದಂತೆ ಮಿಕ್ಯಾವ ಜಿಲ್ಲೆಗಳಲ್ಲಿ ಇಂದು ಮಳೆಯ ಸಂಭವ ಇರುವುದಿಲ್ಲ ಎನ್ನಲಾಗಿದೆ.

Exit mobile version