ಶಾಲೆಗಳಲ್ಲಿ ಉಚಿತ ಸ್ಯಾನಿಟರಿ ಪ್ಯಾಡ್​ ಪೂರೈಕೆಗೆ ಸುಪ್ರೀಂ ಆದೇಶ : ನಿಯಮ ಮೀರಿದ್ರೆ ಶಾಲೆಗಳ ಲೈಸೆನ್ಸ್​ ಬಂದ್​

ದೇಶದಲ್ಲಿರುವ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಉಚಿತ ಸ್ಯಾನಿಟರಿ ಪ್ಯಾಡ್​ಗಳನ್ನು ಎಲ್ಲಾ ಖಾಸಗಿ ಹಾಗೂ ಸರ್ಕಾರಿ ಶಾಲೆಗಳಿಗೆ ಕಡ್ಡಾಯವಾಗಿ ವಿತರಿಸಬೇಕು ಎಂದು ಸುಪ್ರೀಂ ಕೋರ್ಟ್ ಖಡಕ್​ ಆದೇಶ ಹೊರಡಿಸಿದೆ. ಜೈವಿಕವಾಗಿ ಕರಗಬಲ್ಲ ಮುಟ್ಟಿನ ಪ್ಯಾಡ್​ಗಳನ್ನು ವಿತರಿಸುವ ಮೂಲಕ ಪರಿಸರಕ್ಕೆ ಹಾನಿಯಾಗದಂತೆ ನೋಡಿಕೊಳ್ಳಿ ಎಂದು ತಾಕೀತು ಮಾಡಿದೆ.
ಋತುಚಕ್ರದ ಆರೋಗ್ಯ ಮೂಲಭೂತ ಹಕ್ಕಾಗಿದೆ. ಹೀಗಾಗಿ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿರುವ ಸರ್ಕಾರಗಳು ಶಾಲೆಗಳಲ್ಲಿ ಉಚಿತ ಸ್ಯಾನಿಟರಿ ಪ್ಯಾಡ್​ ಹಂಚಿಕೆಯಾಗುತ್ತಿದೆಯೇ ಇಲ್ಲವೇ ಎಂಬುದರ ಮುತುವರ್ಜಿ ವಹಿಸಬೇಕು ಎಂದು ಹೇಳಿದೆ.
ಇನ್ನು ಇದರ ಜೊತೆಯಲ್ಲಿ ಶಾಲೆಗಳಲ್ಲಿ ಗಂಡು ಹಾಗೂ ಹೆಣ್ಣು ಮಕ್ಕಳಿಗೆ ಪ್ರತ್ಯೇಕವಾಗಿ ಶೌಚಾಲಯಗಳು ನಿರ್ಮಾಣಗೊಂಡಿರಬೇಕು. ಪ್ರತಿಯೊಂದು ಶಾಲೆಗಳು ಈ ನಿಯಮಗಳನ್ನು ಪಾಲಿಸುವುದು ಕಡ್ಡಾಯ. ಇಲ್ಲವಾದಲ್ಲಿ ಶಾಲೆಗಳ ಲೈಸೆನ್ಸ್​ ರದ್ದಾಗಲಿದೆ ಹಾಗೂ ಇದರ ಹೊಣೆಯನ್ನು ಆಯಾ ಸರ್ಕಾರಗಳೇ ಹೊರಬೇಕು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

Exit mobile version