Bengaluru: ಪ್ರತಾಪ್ ಸಿಂಹಗೆ ಬಿಜೆಪಿಯೇ ಟಿಕೆಟ್ ನೀಡಿಲ್ಲ: ಸಿಎಂ ಸಿದ್ದರಾಮಯ್ಯ ಟಾಂಗ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಜನ್ಮದಿನಾಚರಣೆ ಅಂಗವಾಗಿ ಬೆಂಗಳೂರಿನಲ್ಲಿಂದು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ವೇಳೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಟೀಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

ಟಿಕೆಟ್‌ ವಿಷಯ ತೆಗೆದು ಟ್ರಿಗರ್‌ ಮಾಡಿದ ಸಿಎಂ

ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಸರ್ಕಾರದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಪ್ರತಾಪ್ ಸಿಂಹ ಅವರ ಆರೋಪವನ್ನು ಮುಖ್ಯಮಂತ್ರಿಗಳು ತಳ್ಳಿಹಾಕಿದರು. “ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಪಕ್ಷದವರೇ ಟಿಕೆಟ್ ನೀಡಲಿಲ್ಲ” ಎಂದು ಹೇಳುವ ಮೂಲಕ ಅವರ ರಾಜಕೀಯ ಅಸ್ತಿತ್ವವನ್ನೇ ಸಿಎಂ ಪ್ರಶ್ನಿಸಿದರು.

ಇದನ್ನೂ ಓದಿ: ಶಾಲೆಗಳಲ್ಲಿ ಉಚಿತ ಸ್ಯಾನಿಟರಿ ಪ್ಯಾಡ್​ ಪೂರೈಕೆಗೆ ಸುಪ್ರೀಂ ಆದೇಶ : ನಿಯಮ ಮೀರಿದ್ರೆ ಶಾಲೆಗಳ ಲೈಸೆನ್ಸ್​ ಬಂದ್​

ಹೈಕಮಾಂಡ್‌ ತೀರ್ಮಾನ ಅಂತಿಮ ಎಂದು ನುಣುಚಿಕೊಂಡ ಸಿಎಂ

ಇದೇ ಸಂದರ್ಭದಲ್ಲಿ ರಾಜ್ಯ ರಾಜಕಾರಣದ ನಾಯಕತ್ವ ಬದಲಾವಣೆಯ ಕುರಿತು ಮಾತನಾಡಿದ ಅವರು, ಈ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಸ್ಪಷ್ಟಪಡಿಸಿದರು. ವರಿಷ್ಠರು ಕರೆದರೆ ಮಾತ್ರ ದೆಹಲಿಗೆ ಹೋಗುವುದಾಗಿ ಅವರು ತಿಳಿಸಿದರು.

ಬಜೆಟ್‌ ಸಿದ್ಧತೆಗಳ ಕುರಿತು ಮಾತಾಡಿದ ಸಿಎಂ

ಬಜೆಟ್ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದ ಸಿಎಂ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಸ್ಸಾಂ ಪ್ರವಾಸದಲ್ಲಿರುವ ಕಾರಣ ಇಂದಿನ ಸಭೆಗೆ ಗೈರಾಗುತ್ತಿದ್ದಾರೆ ಎಂದು ವಿವರಿಸಿದರು. ಅಲ್ಲದೆ, ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರನ್ನು ಸ್ಮರಿಸಿದ ಸಿದ್ದರಾಮಯ್ಯ, ಹನುಮಂತಯ್ಯ ಅವರು ರಾಜ್ಯ ಕಂಡ ಅತ್ಯಂತ ಪ್ರಾಮಾಣಿಕ ಹಾಗೂ ಧೀಮಂತ ರಾಜಕಾರಣಿ ಎಂದು ಬಣ್ಣಿಸಿದರು.

Exit mobile version