ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅರೆಸ್ಟ್  

Congress MLA : ಅಕ್ರಮ ಆನ್ಲೈನ್ ಮತ್ತು ಆಫ್ಲೈನ್ ಬೆಟ್ಟಿಂಗ್, ಗೇಮಿಂಗ್ ಅಪ್ಲಿಕೇಶನ್ಗಳ ಮೂಲಕ ಹಣ ವರ್ಗಾವಣೆ ಮತ್ತು ತೆರಿಗೆ ವಂಚನೆ ಆರೋಪದ ಅಡಿಯಲ್ಲಿ ಕಾಂಗ್ರೆಸ್ ಶಾಸಕ ಕೆಸಿ ವೀರೇಂದ್ರ ಅಲಿಯಾಸ್ ಪಪ್ಪಿ ಅವರನ್ನು ಜಾರಿ ನಿರ್ದೇಶನಾಲಯ (ED) ಬಂಧಿಸಿದೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಅಲಿಯಾಸ್ ಪಪ್ಪಿ ಮನೆಯ ಮೇಲೆ ನಿನ್ನೆ ಇಡಿ ದಾಳಿ ನಡೆಸಿತ್ತು. ದಾಳಿಯ ವೇಳೆಯಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ಪತ್ತೆಯಾಗಿತ್ತು. ಅಲ್ಲದೇ ಮಹತ್ವದ ದಾಖಲೆಗಳು ಲಭ್ಯವಾಗಿದ್ದವು.

ಗೋವಾದಲ್ಲಿ ಕ್ಯಾಸಿನೊ ವ್ಯವಹಾರ ನಡೆಸುತ್ತಿರುವ ವೀರೇಂದ್ರ ಪಪ್ಪಿ ಅವರ ಸಂಬಂಧಪಟ್ಟ ಬೆಂಗಳೂರು, ಚಿತ್ರದುರ್ಗ, ಹುಬ್ಬಳ್ಳಿ, ಗೋವಾ ಮತ್ತು ಮುಂಬೈ ಸೇರಿ ಸುಮಾರು 30 ಸ್ಥಳಗಳ ಮೇಲೆ ಇಡಿ ಏಕಕಾಲಕ್ಕೆ ದಾಳಿ ನಡೆಸಿತ್ತು.

ಈ ದಾಳಿಯ ವೇಳೆ ಕೋಟ್ಯಂತರ ರೂಪಾಯಿ ನಗದು, ಚಿನ್ನಾಭರಣಗಳು ಮತ್ತು ವಿದೇಶಿ ಕರೆನ್ಸಿಗಳು ಪತ್ತೆಯಾಗಿವೆ. ದಾಳಿ ನಡೆದ ಸಂದರ್ಭದಲ್ಲಿ ಸಿಕ್ಕಿಂಗೆ ತೆರಳಿದ್ದ ಪಪ್ಪಿ ಅವರನ್ನು ಅಲ್ಲೇ ವಶಕ್ಕೆ ಪಡೆದುಕೊಂಡ ಇಡಿ ಅಧಿಕಾರಿಗಳು, ನ್ಯಾಯಾಲಯಕ್ಕೆ ಹಾಜರುಪಡಿಸಿ ಟ್ರಾನ್ಸಿಟ್ ವಾರೆಂಟ್ ಮೂಲಕ ಬೆಂಗಳೂರಿಗೆ ಕರೆತಂದಿದ್ದಾರೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಈ ತನಿಖೆ ನಡೆಯುತ್ತಿದೆ. ಈ ಹಿಂದೆ 2016ರಲ್ಲೂ ವೀರೇಂದ್ರ ಪಪ್ಪಿ ಮನೆ ಮೇಲೆ ಐಟಿ ದಾಳಿ ನಡೆದಿತ್ತು, ಆಗಲೂ ಅಪಾರ ಪ್ರಮಾಣದ ನಗದು ಮತ್ತು ಚಿನ್ನ ಪತ್ತೆಯಾಗಿತ್ತು.

ಕಾಂಗ್ರೆಸ್ ಶಾಸಕನ ಬಂಧನವು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಹೆಚ್ಚಿನ ವಿಚಾರಣೆಗಾಗಿ ಎಸ್ಐಟಿ ಪಪ್ಪಿಯನ್ನು ತನ್ನ ವಶಕ್ಕೆ ಪಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಬೆಳವಣಿಗೆಗಳು ನಿರೀಕ್ಷಿತವಾಗಿವೆ.

Exit mobile version