ರಾಜ್ಯದ ಗೃಹಲಕ್ಷ್ಮೀಯರಿಗೆ ಗುಡ್​ ನ್ಯೂಸ್​ : 2 ಕಂತುಗಳ ಹಣ ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ

ರಾಜ್ಯದ ಗೃಹಲಕ್ಷ್ಮೀಯರಿಗೆ ರಾಜ್ಯ ಸರ್ಕಾರ ಗುಡ್​ನ್ಯೂಸ್​ ನೀಡಿದೆ. ರಾಜ್ಯದ ಮಹಿಳೆಯರ ಖಾತೆಗೆ ಶೀಘ್ರದಲ್ಲಿಯೇ 2 ಕಂತುಗಳ ಗೃಹಲಕ್ಷ್ಮೀ ಹಣ ಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಮಾಹಿತಿ ನೀಡಿದ್ದಾರೆ.
ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ವೀರಭೂಮಿ ಸ್ಮಾರಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳು ರಾಜ್ಯದ ಮಹಿಳೆಯರ ಬ್ಯಾಂಕ್​ ಖಾತೆಗಳಿಗೆ 2000 ರೂಪಾಯಿ ಹಾಕುವ ಕೆಲಸವನ್ನು ಪ್ರಾಮಾಣಿಕತೆಯಿಂದ ಮಾಡುತ್ತಿದ್ದೇವೆ. ಹಣ ಜಮೆಯಲ್ಲಿ ವಿಳಂಬವಾಗ್ತಿದೆ ಎಂದು ಮಹಿಳೆಯರು ಆತಂಕಕ್ಕೆ ಒಳಗಾಗಿದ್ದರು. ಆದರೆ ಇಂದು ಸ್ವತಃ ಸಿಎಂ ಸಿದ್ದರಾಮಯ್ಯ ಅವರು 2 ಕಂತುಗಳ ಹಣ ಬಿಡುಗಡೆ ಮಾಡಿದ್ದೇನೆ. ಶೀಘ್ರದಲ್ಲೇ ಅವರ ಖಾತೆಗಳಿಗೆ ಹಣ ಹಾಕಿ ಎಂದು ಸೂಚನೆ ನೀಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ದಕ್ಷಿಣ ಕನ್ನಡದ ಪ್ರಮುಖ ಹೆದ್ದಾರಿ ಡಿಪಿಆರ್​​ಗಳಿಗೆ ಯೋಜನೆಗಳಿಗೆ ಕೇಂದ್ರದ ಅನುಮೋದನೆ

ಬೇರೆ ಪಕ್ಷಗಳು ಜಾತಿ, ಧರ್ಮವನ್ನು ಮುಂದಿಟ್ಟುಕ್ಕೊಂಡು ಸಮಾಜವನ್ನು ಒಡೆಯುವ ಕಾರ್ಯ ಮಾಡುತ್ತಿದ್ದರೆ ನಮ್ಮ ಸರ್ಕಾರವು ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಬದುಕನ್ನು ಬೆಳಗುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ಸಮನಾಗಿ ಎಲ್ಲರಿಗೂ ತಲುಪಿಸುವ ಕಾರ್ಯ ಮಾಡುತ್ತಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು. ಎದುರಿಗೆ ನೆರೆದಿದ್ದ ಮಹಿಳೆಯರ ಬಳಿ ಯಾರೆಗಲ್ಲ ಗೃಹಲಕ್ಷ್ಮೀ ಹಣ ಬರುತ್ತಿದೆ ಕೈ ಎತ್ತಿ ಎಂದು ಕೇಳಿದರು. ಈ ವೇಳೆ ಅನೇಕ ಮಹಿಳೆಯರು ಕೈ ಎತ್ತುವ ಮೂಲಕ ಸಂತೋಷ ಹೊರಹಾಕಿದರು.

Exit mobile version