ಕರ್ನಾಟಕ ಸರ್ಕಾರ vs ರಾಜ್ಯಪಾಲರು: ರಾಷ್ಟ್ರಪತಿ ತಲುಪಿದ ಸಂಘರ್ಷ

Karnataka Government vs Governor: ಬೆಂಗಳೂರು: ಕರ್ನಾಟಕ ವಿಧಾನಮಂಡಲದ ಜಂಟಿ ಅಧಿವೇಶನದ ಸಂದರ್ಭದಲ್ಲಿ ನಡೆದ ನಾಟಕೀಯ ಬೆಳವಣಿಗೆಗಳು ಮತ್ತು ಸರ್ಕಾರದೊಂದಿಗೆ ಉಂಟಾದ ಭಿನ್ನಾಭಿಪ್ರಾಯಗಳ ಕುರಿತು ರಾಜ್ಯಪಾಲರು ರಾಷ್ಟ್ರಪತಿಗಳಿಗೆ ಸುದೀರ್ಘ ವರದಿಯೊಂದನ್ನು ಸಲ್ಲಿಸಿದ್ದಾರೆ. ಜನವರಿ 21 ಮತ್ತು 22, 2026 ರಂದು ನಡೆದ ಘಟನೆಗಳನ್ನು ಉಲ್ಲೇಖಿಸಿ ಈ ವರದಿ ಸಿದ್ಧಪಡಿಸಲಾಗಿದೆ.

ರಾಜ್ಯಪಾಲರ ವರದಿಯಲ್ಲಿ ಏನಿದೆ?

ಗಣರಾಜ್ಯೋತ್ಸವ ಭಾಷಣ ಓದಲ್ವಾ ರಾಜ್ಯಪಾಲರು? ಕರ್ನಾಟಕ ಸರ್ಕಾರದ ಮುಂದಿನ ನಡೆಯೇನು?

​ರಾಜ್ಯ ಸರ್ಕಾರದ ಸಾಧನೆಗಳನ್ನು ಹೇಳುವ ಭಾಷಣದಲ್ಲಿ ಕೇಂದ್ರದ ಯೋಜನೆಗಳನ್ನು ಟೀಕಿಸುವ ವಿಚಾರವಾಗಿ ರಾಜ್ಯಪಾಲರು ಮತ್ತು ಸರ್ಕಾರದ ನಡುವೆ ಸಂಘರ್ಷ ಏರ್ಪಟ್ಟಿತ್ತು. ಇದು ಸದನದಲ್ಲಿ ಸದಸ್ಯರ ಗದ್ದಲಕ್ಕೆ ಕಾರಣವಾಗಿತ್ತು. ಈಗ ಈ ಇಡೀ ಪ್ರಹಸನವು ರಾಷ್ಟ್ರಪತಿಗಳ ಅಂಗಳಕ್ಕೆ ತಲುಪಿದ್ದು, ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ.

Exit mobile version