ರಾಜ್ಯ ರಾಜಕಾರಣಕ್ಕೆ ಕುಮಾರಸ್ವಾಮಿ ರೀ ಎಂಟ್ರಿ! ಸ್ವತಃ ತಿಳಿಸಿದ ಹೆಚ್‌ಡಿಕೆ

HD Kumaraswamy enters Karnataka Politics: ಮಂಡ್ಯ: ಕೇಂದ್ರ ಸಚಿವರಾಗಿ ದೆಹಲಿ ರಾಜಕಾರಣದಲ್ಲಿ ಸಕ್ರಿಯರಾಗಿದ್ದರೂ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಚಿತ್ತ ಮಾತ್ರ ಈಗಲೂ ಕರ್ನಾಟಕದ ಮೇಲೆಯೇ ಇದೆ. ಇಂದು ಮಂಡ್ಯದಲ್ಲಿ ಅವರು ನೀಡಿರುವ ಹೇಳಿಕೆಯೊಂದು ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದ್ದು, ಅವರು ಮತ್ತೆ ರಾಜ್ಯಕ್ಕೆ ಮರಳುವ ಮುನ್ಸೂಚನೆ ನೀಡಿದ್ದಾರೆ.

ಇಂದು ಮಂಡ್ಯ ತಾಲೂಕಿನ ಶಿವಹಳ್ಳಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಮಹತ್ವದ ಸುಳಿವು ಬಿಟ್ಟುಕೊಟ್ಟರು. “ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಪಡುತ್ತಾರೋ, ಆ ಕ್ಷೇತ್ರದಿಂದಲೇ ನಾನು ಸ್ಪರ್ಧಿಸುತ್ತೇನೆ” ಎಂದು ಹೇಳುವ ಮೂಲಕ, ತಾವು ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳುವ ಇಂಗಿತವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ.

ಎನ್.ಡಿ.ಎ ಜೊತೆ ಕೈಜೋಡಿಸಿ ಕೇಂದ್ರದಲ್ಲಿ ಮಂತ್ರಿಯಾಗಿದ್ದರೂ, ರಾಜ್ಯ ರಾಜಕಾರಣದಲ್ಲಿ ಮತ್ತೆ ಸಕ್ರಿಯರಾಗಲು ಕುಮಾರಸ್ವಾಮಿ ಅವರು ತಯಾರಿ ನಡೆಸುತ್ತಿರುವುದು ಈ ಹೇಳಿಕೆಯಿಂದ ಸ್ಪಷ್ಟವಾಗಿದೆ. ಇದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಎದುರಾಳಿ ಪಾಳಯದಿಂದ ಸಿಗುತ್ತಿರುವ ಎಚ್ಚರಿಕೆಯ ಗಂಟೆಯೂ ಹೌದು ಎಂದು ವಿಶ್ಲೇಷಿಸಲಾಗುತ್ತಿದೆ.

Exit mobile version