ಡಿ.22ರವರೆಗೂ ರಾಜ್ಯದಲ್ಲಿ ಮುಂದುವರಿಯಲಿದೆ ಚಳಿ : ಹೇಗಿರಲಿದೆ ಕರಾವಳಿ ಜಿಲ್ಲೆಗಳ ವಾತಾವರಣ ?

Karnataka Weather: ರಾಜ್ಯದ ಜನತೆ ಈಗಾಗಲೇ ತೀವ್ರ ಚಳಿಗೆ ಕಂಗಾಲಾಗಿದ್ದಾರೆ. ಈ ನಡುವೆ ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಚಳಿಯ ವಾತಾವರಣ ಇದೇ ರೀತಿ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಅನೇಕ ಭಾಗಗಳಲ್ಲಿ ತಾಪಮಾನ ಇನ್ನೂ 3 ಡಿಗ್ರಿ ಕುಸಿತ ಕಾಣಲಿದೆ ಎಂದು ಐಎಂಡಿ ತಿಳಿಸಿದೆ.

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ದಟ್ಟ ಮೋಡ ಕವಿದ ವಾತಾವರಣ ಇರಲಿದೆ. ಈ ಭಾಗಗಳಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್​ ಇದ್ದರೆ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್​ ಇರಲಿದೆ. ಧಾರವಾಡದಂತಹ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನ 9 ಡಿಗ್ರಿ ಸೆಲ್ಸಿಯಸ್​ ದಾಖಲಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: ಕೆಎಸ್‌ಆರ್‌ಟಿಸಿ ಚಾಲಕರಿಗೆ ಗುಡ್ ನ್ಯೂಸ್‌: ದುಪ್ಪಟ್ಟಾಯ್ತು ಮಾಸಿಕ ಭತ್ಯೆ ಹಾಗೂ ಪುರಸ್ಕಾರ ದರ

ಕರಾವಳಿ ಕರ್ನಾಟಕ ಭಾಗಗಳಲ್ಲಿ ತಾಪಮಾನದಲ್ಲಿ ಏರಿಕೆ ಕಂಡು ಬರಲಿದೆ. ದಕ್ಷಿಣ ತಮಿಳುನಾಡು ಹಾಗೂ ಸಮೀಪದ ಪ್ರದೇಶಗಳಲ್ಲಿ ಸಮುದ್ರ ಮಟ್ಟದಿಂದ 3.1 ಕಿಲೋ ಮೀಟರ್​ ಎತ್ತರದಲ್ಲಿ ಮೇಲ್ಮಟ್ಟದ ವಾಯು ಚಂಡಮಾರುತ ಪ್ರಸರಣ ಕಡಿಮೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Exit mobile version