ಕೆನಡಾದಲ್ಲಿ ಕನ್ನಡಿಗ ಸಾಫ್ಟ್‌ವೇರ್ ಇಂಜಿನಿಯರ್ ಹತ್ಯೆ: ಮೃತದೇಹ ತರಲು ಕೇಂದ್ರ ಸಚಿವ ವಿ. ಸೋಮಣ್ಣ ಕ್ರಮ

kannadiga software engineer murdered canada : ನವದೆಹಲಿ/ಬೆಂಗಳೂರು: ಕೆನಡಾದ ಟೊರೊಂಟೊದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಚಂದನ್ ಕುಮಾರ್ (37) ಬಲಿಯಾಗಿದ್ದಾರೆ. ಈ ದುರ್ಘಟನೆಗೆ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

kannadiga software engineer murdered canada : ಘಟನೆಯ ವಿವರ:

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಮೂಲದವರಾದ ಚಂದನ್ ಕುಮಾರ್, ಕಳೆದ 6 ವರ್ಷಗಳಿಂದ ಟೊರೊಂಟೊದಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಸ್ಥಳೀಯ ಪೊಲೀಸರು ಮೃತರ ಪಾಲಕರಿಗೆ ದೂರವಾಣಿ ಕರೆ ಮಾಡಿ ಹತ್ಯೆಯ ವಿಷಯ ತಿಳಿಸಿದ್ದಾರೆ. ಈ ವಿಷಯ ತಿಳಿದ ಕೂಡಲೇ ಸಚಿವ ವಿ. ಸೋಮಣ್ಣ ಅವರು ಮೃತರ ಸಂಬಂಧಿಕರನ್ನು ಸಂಪರ್ಕಿಸಿ ಸಾಂತ್ವನ ಹೇಳಿದ್ದಾರೆ.

ಮೃತದೇಹ ತರಲು ಸರ್ಕಾರದ ಪ್ರಯತ್ನ:

ಚಂದನ್ ಕುಮಾರ್ ಅವರ ಮೃತದೇಹವನ್ನು ತಾಯ್ನಾಡಿಗೆ ಮರಳಿ ತರಲು ಸಹಕರಿಸುವಂತೆ ಮೃತರ ಪಾಲಕರು, ನೆಲಮಂಗಲ ಶಾಸಕ ಶ್ರೀನಿವಾಸ್ ಹಾಗೂ ವಿಧಾನ ಪರಿಷತ್ ಸದಸ್ಯ ಡಿ.ಕೆ. ರವಿ ಅವರು ಸಚಿವರಿಗೆ ಮನವಿ ಮಾಡಿದ್ದರು.
ಈ ಕುರಿತು ತಕ್ಷಣವೇ ಕಾರ್ಯಪ್ರವೃತ್ತರಾಗಿರುವ ಸಚಿವ ವಿ. ಸೋಮಣ್ಣ ಅವರು:

ಇದನ್ನೂ ಓದಿ: ಧರ್ಮಸ್ಥಳದ ಭಕ್ತಾದಿಗಳ ಗಮನಕ್ಕೆ : ವಸತಿ ಗೃಹಗಳ ಬುಕ್ಕಿಂಗ್​ ನೆಪದಲ್ಲಿ ಸೈಬರ್​ ವಂಚನೆ, ಆಡಳಿತ ಮಂಡಳಿಯಿಂದ ಎಚ್ಚರಿಕೆ

ಪಾಲಕರಿಗೆ ಧೈರ್ಯ ತುಂಬಿದ ಸಚಿವರು:
“ಭಾರತ ಸರ್ಕಾರವು ನಿಮ್ಮೊಂದಿಗಿದೆ. ಮೃತದೇಹವನ್ನು ತಾಯ್ನಾಡಿಗೆ ತರಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಪಾಲಕರು ದೃತಿಗೆಡಬಾರದು,” ಎಂದು ಸಚಿವ ವಿ. ಸೋಮಣ್ಣ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ.

Exit mobile version