‌ರಾಜ್ಯ ಸರ್ಕಾರದ ಮಾಸ್ಟರ್‌ ಪ್ಲಾನ್; ಮಹಿಳೆಯರ ಉಚಿತ ಬಸ್‌ ಪ್ರಯಾಣದ ದುರುಪಯೋಗಕ್ಕೆ ಲಗಾಮು

Shakti Scheme Free Bus | Smart Card: ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಶಕ್ತಿ’ ಯೋಜನೆಯಡಿ ಉಚಿತ ಬಸ್ ಪ್ರಯಾಣ ಮಾಡುತ್ತಿರುವ ಮಹಿಳೆಯರಿಗೆ ಶೀಘ್ರದಲ್ಲೇ ಸ್ಮಾರ್ಟ್ ಕಾರ್ಡ್‌ಗಳನ್ನು ನೀಡಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಇದರಿಂದಾಗಿ ಇನ್ನು ಮುಂದೆ ಬಸ್‌ಗಳಲ್ಲಿ ಆಧಾರ್ ಕಾರ್ಡ್ ತೋರಿಸುವ ಕಿರಿಕಿರಿ ತಪ್ಪಲಿದೆ. ಇನ್ಮುಂದೆ ಬಸ್‌ಗಳಲ್ಲಿ ಆಧಾರ್ ಕಾರ್ಡ್ ತೋರಿಸುವ ಬದಲು, ‘ಶಕ್ತಿ ಸ್ಮಾರ್ಟ್ ಕಾರ್ಡ್’ ಕಡ್ಡಾಯವಾಗಲಿದೆ. ಈ ಕ್ರಮವು ಯೋಜನೆಯಲ್ಲಿ ನಡೆಯುತ್ತಿದ್ದ ಕೆಲವು ಅಕ್ರಮಗಳಿಗೆ ಬ್ರೇಕ್ ಹಾಕುವ ಮುನ್ಸೂಚನೆ ನೀಡಿದೆ.

ನಕಲಿ ದಾಖಲೆಗಳಿಗೆ ಬೀಳಲಿದೆ ಲಗಾಮು

ಪ್ರಸ್ತುತ ಮಹಿಳೆಯರು ತಮ್ಮ ಆಧಾರ್ ಕಾರ್ಡ್ ತೋರಿಸಿ ಉಚಿತ ಟಿಕೆಟ್ ಪಡೆಯುತ್ತಿದ್ದಾರೆ. ಆದರೆ, ಈ ವ್ಯವಸ್ಥೆಯಲ್ಲಿ ಅನ್ಯ ರಾಜ್ಯದವರು ಅಥವಾ ನಕಲಿ ಆಧಾರ್ ಕಾರ್ಡ್ ತೋರಿಸಿ ಉಚಿತ ಪ್ರಯಾಣ ಮಾಡುವ ಮೂಲಕ ಸರ್ಕಾರದ ಹಣ ದುರುಪಯೋಗವಾಗುತ್ತಿದೆ ಎಂಬ ದೂರುಗಳು ಕೇಳಿಬಂದಿದ್ದವು.

ಬಸ್ ಮತ್ತು ಮೆಟ್ರೋ ಎರಡಕ್ಕೂ ಒಂದೇ ಕಾರ್ಡ್!

ಈ ಹೊಸ ಕಾರ್ಡ್ ಕೇವಲ ಬಸ್ ಪ್ರಯಾಣಕ್ಕೆ ಮಾತ್ರ ಸೀಮಿತವಾಗಿಲ್ಲ. ಇದನ್ನು ‘ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್’ (NCMC) ಮಾದರಿಯಲ್ಲಿ ವಿನ್ಯಾಸಗೊಳಿಸಲಾಗಿದೆ.

ಪಿಯು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಇದೇ ವೇಳೆ ಕೆಎಸ್‌ಆರ್‌ಟಿಸಿ (KSRTC) ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ಸೌಲಭ್ಯ ಘೋಷಿಸಿದೆ. ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ನಡೆಯಲಿರುವ ಪರೀಕ್ಷಾ ಅವಧಿಯಲ್ಲಿ, ಪರೀಕ್ಷಾರ್ಥಿಗಳು ತಮ್ಮ ‘ಹಾಲ್ ಟಿಕೆಟ್’ ತೋರಿಸಿ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು.

Exit mobile version