ಕುಂದಾಪುರದಲ್ಲಿ ಶೂಟೌಟ್ : ಬಾರಕೂರು ವ್ಯಕ್ತಿಯ ಹತ್ಯೆ
ಕರಾವಳಿ ಬೆಳ್ಳಂಬೆಳ್ಳಗ್ಗೆಯೇ ಬೆಚ್ಚಿ ಬಿದ್ದಿದೆ. ಕುಂದಾಪುರದಲ್ಲಿ ಶೂಟೌಟ್ ನಡೆದಿದ್ದು, ಉಡುಪಿ ಜಿಲ್ಲೆಯ ಬಾರಕೂರು ಮೂಲದ ಐವನ್ ರಿಚರ್ಡ್ ಮಸ್ಕರೇನ್ ಎಂಬವರು ಹತ್ಯೆಯಾಗಿದ್ದಾರೆ.

ಕುಂದಾಪುರ : ಕರಾವಳಿ ಬೆಳ್ಳಂಬೆಳ್ಳಗ್ಗೆಯೇ ಬೆಚ್ಚಿ ಬಿದ್ದಿದೆ. ಕುಂದಾಪುರದಲ್ಲಿ ಶೂಟೌಟ್ ನಡೆದಿದ್ದು, ಉಡುಪಿ ಜಿಲ್ಲೆಯ ಬಾರಕೂರಿನ ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ ಎಂಬವರು ಹತ್ಯೆಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಕುಂದಾಪುರದ ಹೋಲಿ ರೋಜರಿ ಚರ್ಚ್ ಬಳಿಯಲ್ಲಿ ಈ ಘಟನೆ ನಡೆದಿದೆ. ಮುಂಜಾನೆ 3.3ರ ಸುಮಾರಿಗೆ 45 ವರ್ಷ ಪ್ರಾಯದ ಐವನ್ ರಿಚರ್ಡ್ ಮಸ್ಕರೇನಸ್ ತನ್ನ ಕಾರಿನಲ್ಲಿ ಬರುತ್ತಿದ್ದ ವೇಳೆಯಲ್ಲಿ ಈ ಘಟನೆ ನಡೆದಿದೆ. ಶೂಟೌಟ್ ಮಾಡಿದ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಈ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಕುಂದಾಪುರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಉಡುಪಿ ಎಸ್‌ಪಿ ಹರಿರಾಂ ಶಂಕರ್ ಸೇರಿದಂತೆ ಹಲವು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.





